Latest News ಕ್ರೀಡೆ

IPL 2026: RCB ಪಂದ್ಯಗಳ ವೇಳಾಪಟ್ಟಿ ಹೀಗಿದೆ, ಯಾರ ಜೊತೆ ಎಲ್ಲಿ ನಡೆಯಲಿದೆ ಮ್ಯಾಚ್..?

rcb ipl 2026 schedule

2026ರ ಇಂಡಿಯನ್ ಪ್ರೀಮಿಯರ್ ಲೀಗ್ ಮೊದಲ ಹಂತದ ಒಟ್ಟು 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಇದೇ ಮಾರ್ಚ್ 28ರಿಂದ ಅದ್ದೂರಿಯಾಗಿ ಪ್ರಾರಂಭವಾಗಲಿದ್ದು, ಮೊದಲ ಉದ್ಘಾಟನಾ ಪಂದ್ಯವನ್ನು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ. ಅದು ತವರು ಅಂಗಳ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎನ್ನುವುದು ಅಭಿಮಾನಿಗಳಿಗೆ ಸಂತಸದ ಸುದ್ದಿ…

IPL ಸೀಸನ್ 19ರ ಮೊದಲ ಹಂತದ ಪಂದ್ಯಗಳು ಮಾರ್ಚ್ 28ರಿಂದ ಏಪ್ರಿಲ್ 12ರವರೆಗೂ ನಡೆಯಲಿದ್ದು, ಈ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಹಂತದ ಟೂರ್ನಿಯಲ್ಲಿ ಒಟ್ಟು ನಾಲ್ಕು ಪಂದ್ಯಗಳನ್ನು ಆಡಲಿದೆ. ಎರಡು ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದ್ದು, ಇನ್ನೆರೆಡು ಮ್ಯಾಚ್​ ಗುವಾಹಟ್ಟಿ ಹಾಗೂ ಮುಂಬೈನಲ್ಲಿ ಆಡಲಿದೆ.

rcb ipl 2026 schedule

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಪಂದ್ಯದಲ್ಲಿ ಸನ್​ ರೈಸರ್ಸ್ ಹೆದರಾಬಾದ್ ತಂಡವನ್ನು ಎದುರಿಸಲಿದೆ. ಪಂದ್ಯ ಮಾ.28ರ ಸಂಜೆ 7:30ಕ್ಕೆ ನಡೆಯಲಿದೆ. ತನ್ನ ಎರಡನೇ ಮ್ಯಾಚ್​​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಏಪ್ರಿಲ್ 5ರ ಸಂಜೆ 7.30ಕ್ಕೆ ತವರು ಅಂಗಳ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು ಮೂರನೇ ಪಂದ್ಯವನ್ನು ಏಪ್ರಿಲ್ 10ರಂದು ರಾಜಸ್ಥಾನ ರಾಯಲ್ಸ್ ತಂಡದ ಎದುರು ಸೆಣಸಾಡಲಿದೆ. ಈ ಮ್ಯಾಚ್ ಸಂಜೆ 7.30ಕ್ಕೆ ಗುವಾಹಟ್ಟಿಯಲ್ಲಿ ನಡೆಯಲಿದೆ.

ಮೊದಲ ಹಂತದ ವೇಳಾಪಟ್ಟಿ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ನಾಲ್ಕನೇ ಪಂದ್ಯವನ್ನು ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಆಡಲಿದೆ. ಈ ಪಂದ್ಯ ಏಪ್ರಿಲ್ 12ರಂದು ಸಂಜೆ 730ಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ

Leave a Reply

Your email address will not be published. Required fields are marked *