ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ಜೋಶ್ ಇಂಗ್ಲಿಸ್ IPL ನಡುವೆಯೂ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ತನ್ನ ದೀರ್ಘಕಾಲದ ಗೆಳತಿ ಮೇಗನ್ ಕಿನ್ಕಾರ್ಟ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಸ್ಟ್ರೇಲಿಯಾದ ಈ ಸ್ಪೋಟಕ ಬ್ಯಾಟರ್ ಏಪ್ರಿಲ್ 18, 2026 ರಂದು ಪಶ್ಚಿಮ ಆಸ್ಟ್ರೇಲಿಯಾದ ಮಾರ್ಗರೆಟ್ ರಿವರ್ನಲ್ಲಿರುವ ಐಷಾರಾಮಿ ರೆಸಾರ್ಟ್ನಲ್ಲಿ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.
ತಮ್ಮ ಕಾರಣದಿಂದ ಜೋಶ್ ಇಂಗ್ಲಿಸ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ ಮದುವೆ ಕಾರ್ಯಕ್ರಮಗಳು ಮುಗಿದಿದ್ದು, ಮುಂದಿನ ವಾರ ಭಾರತಕ್ಕೆ ಆಗಮಿಸಲಿದ್ದಾರೆ. ಅಂದರೆ ಮೇ 4 ರಂದು ಜೋಶ್ ಇಂಗ್ಲಿಸ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿರುವ ಲಕ್ನೋ ತಂಡಕ್ಕೆ ಜೋಶ್ ಇಂಗ್ಲಿಸ್ ಅವರ ಆಗಮನ ಹೊಸ ಚೈತನ್ಯ ನೀಡುವ ನಿರೀಕ್ಷೆಯಿದೆ. ತಂಡ ಸತತ ಸೋಲುಗಳಿಂದ ಕಂಗೆಟ್ಟಿದ್ದು, ಇಂಗ್ಲಿಸ್ ಅವರ ಬಿರುಸಿನ ಬ್ಯಾಟಿಂಗ್ ತಂಡದ ಮಧ್ಯಮ ಕ್ರಮಾಂಕವನ್ನು ಬಲಪಡಿಸಲಿದೆ.
