ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿ ಅಲಿಯಾಸ್ ಮಲ್ಲಿಕಾರ್ಜುನ್ ಮತ್ತೆ ಬಂದಿದ್ದಾರೆ. ಕಳೆದ 8 ವರ್ಷಗಳಿಂದ ಕಣ್ಮರೆಯಾಗಿದ್ದ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷರಾಗಿದ್ದಾರೆ. ಮಲ್ಲಿಕಾರ್ಜನ್ನ್ನ ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ತನಿಖೆ ಆಗಬೇಕು’ ಎಂದು ಒತ್ತಾಯ ಕೇಳಿಬಂದಿತ್ತು. ಆದರೀಗ ಮಲ್ಲಿ ದಿಢೀರ್ ಪ್ರತ್ಯಕ್ಷರಾಗಿದ್ದಾರೆ.
ಮಲ್ಲಿಕಾರ್ಜುನ ದರ್ಶನ್ ಮ್ಯಾನೇಜರ್ ಆಗಿರುವ ಜೊತೆಗೆ ನಿರ್ಮಾಪಕರು ಹಾಗೂ ವಿತರಣೆ ಕೂಡ ಮಾಡುತ್ತಿದ್ದರು. ಅವರು ಯಶ್ ಅಭಿನಯದ ‘ಮೊದಲ ಸಲ’ ಚಿತ್ರದ ನಿರ್ಮಾಣದಲ್ಲಿ ಕೈ ಜೋಡಿಸಿದ್ದರು. ಹೋಟೆಲ್ ಉದ್ಯಮ ಕೂಡ ನಡೆಸುತ್ತಿದ್ದರು. ಆದರೆ ಹಣಕಾಸಿನ ಅವ್ಯವಹಾರದ ಆರೋಪದಲ್ಲಿ ಮಲ್ಲಿಕಾರ್ಜುನ್ ತಲೆಮರೆಸಿಕೊಂಡಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ವೇಳೆ ಮತ್ತೆ ಮಲ್ಲಿ ವಿಚಾರ ಚರ್ಚೆಗೆ ಬಂದಿತ್ತು. ಮಲ್ಲಿ ಪ್ರಕರಣವನ್ನು ತನಿಖೆ ಮಾಡಬೇಕು ಎನ್ನುವ ಒತ್ತಾಯ ಕೂಡ ಕೇಳಿಬಂದಿತ್ತು.
ಇದೀಗ ವಾಪಾಸ್ ಬಂದಿರುವ ಮಲ್ಲಿಕಾರ್ಜುನ್ ದಿಢೀರ್ ಪ್ರೆಸ್ ಮೀಟ್ ಕರೆದಿದ್ದಾರೆ. ಈ ಬಗ್ಗೆ ಸುತ್ತೋಲೆ ನೀಡಿರೋ ಅವರು, ‘ನಾನು ಮಲ್ಲಿಕಾರ್ಜುನ್ ಬಿ ಸಂಕನಗೌಡರ. ಮೂಲತಃ ಗದಗದವನು. 18 ವರ್ಷಗಳ ಕಾಲ ನಾನು ಚಲನಚಿತ್ರ ಕ್ಷೇತ್ರದಲ್ಲಿ ಹಲವಾರು ಪ್ರಾಜೆಕ್ಟ್ಗಳಲ್ಲಿ ಸಹಾಯಕ ನಿರ್ದೇಶಕ ನಾಗಿ, ಸಹ ನಿರ್ದೇಶಕನಾಗಿ, ನಿರ್ಮಾಪಕನಾಗಿ, ವಿತರಕನಾಗಿ, ಕೆಲಸ ಮಾಡಿದ್ದೇನೆ. ಕೆಲವು ಅನಿವಾರ್ಯ ಕಾರಣಗಳಿಂದ, ವೈಯಕ್ತಿಕ ಸಮಸ್ಯೆಗಳ ಹಿನ್ನೆಲೆ ಮತ್ತು ಉದ್ಯಮದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಕೆಲವು ವರ್ಷಗಳ ಹಿಂದೆ ನಾನು ಬೆಂಗಳೂರನ್ನು ತಾತ್ಕಾಲಿಕವಾಗಿ ಬಿಡುವಂತಹ ಪರಿಸ್ಥಿತಿ ಬಂತು’ ಎಂದು ಹೇಳಿ ಮಾಧ್ಯಮದ ಮುಂದೆ ಬರಲು ಸಜ್ಜಾಗಿದ್ದಾರೆ. ಮಲ್ಲಿಕಾರ್ಜುನ್ ಯಾವೆಲ್ಲ ವಿತಾರಗಲನ್ನು ರಿವೀಲ್ ಮಾಡಲಿದ್ದಾರೆ ಎನ್ನುವ ಕುತೂಹಲ ಈಗ ಕಾಡಿದೆ.
