ವೈಭವ್ ಸೂರ್ಯವಂಶಿಗೆ ವಿರಾಟ್ ಕೊಹ್ಲಿ ಕಡೆಯಿಂದ ಸಿಕ್ತು ವಿಶೇಷ ಗಿಫ್ಟ್

IPL 2026: ಐಪಿಎಲ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಲೋಕವನ್ನೇ ಬೆರಗುಗೊಳಿಸುತ್ತಿದ್ದಾರೆ. ಏಪ್ರಿಲ್ 10 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ದಿಗ್ಗಜ ಆಟಗಾರರ ಗಮನ ಸೆಳದರು. ಪಂದ್ಯದ ಬಳಿಕ ವೈಭವ್‌ಗೆ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಉಡುಗೊರೆಯೊಂದನ್ನು ನೀಡಿದ್ದಾರೆ.

ಪಂದ್ಯ ಮುಗಿದ ನಂತರ ವೈಭವ್ ಸೂರ್ಯವಂಶಿ ಅವರನ್ನು ಭೇಟಿಯಾದ ವಿರಾಟ್ ಕೊಹ್ಲಿ, ಅವರ ಅದ್ಭುತ ಬ್ಯಾಟಿಂಗ್ ಅನ್ನು ಶ್ಲಾಘಿಸಿದ್ದಾರೆ. ಈ ವೇಳೆ ವೈಭವ್ ಧರಿಸಿದ್ದ ರಾಜಸ್ಥಾನ್ ರಾಯಲ್ಸ್ ಟೋಪಿಯ ಮೇಲೆ ಕೊಹ್ಲಿ ಸಹಿ ಹಾಕಿದರು. “ಡಿಯರ್ ವೈಭವ್, ವೆಲ್ ಡನ್” ಎಂದು ಬರೆದು ಶುಭ ಹಾರೈಸಿದ್ದಾರೆ. ಈ ದೃಶ್ಯ ಕ್ರಿಕೆಟ್ ಅಭಿಮಾನಿಗಳು ಹಾಗೂ ಕೊಹ್ಲಿ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲರ್‌ಗಳ ಬೆವರಿಳಿಸಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ RCB 20 ಓವರ್​ಗಳಲ್ಲಿ 201 ರನ್​ಗಳನ್ನು ಕಲೆಹಾಕಿತ್ತು.

ಈ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್, ಕೇವಲ 26 ಎಸೆತಗಳಲ್ಲಿ ವೈಭವ್ 7 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳನ್ನು ಒಳಗೊಂಡಂತೆ 78 ರನ್ ಬಾರಿಸಿದರು. ಈ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿ ಗೆಲುವಿಗೆ ರುವಾರಿಯಾದರು.

Leave a Reply

Your email address will not be published. Required fields are marked *