ದರ್ಶನ್ ಪತ್ನಿ ವಿಜಯಲಕ್ಷ್ಮೀ ತಮಗೆ ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿದ್ದ ಅಶ್ಲೀಲ ಕಾಮೆಂಟ್ ವಿರುದ್ಧ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದರು. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಅದಕ್ಕೆ ಬೇಕಾದ ಸಾಕ್ಷ್ಯ ಕೂಡ ನೀಡಿದ್ದರು. ಈ ಸಂಬಂಧ ನಡೆದ ತನಿಖೆಯಲ್ಲಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಇದೀಗ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದು, ಕೆಲವು ಶಾಕಿಂಗ್ ವಿಷಯಗಳು ಬೆಳಕಿಗೆ ಬಂದಿದೆ.

ಸಿಸಿಬಿ ಸೈಬರ್ ಕ್ರೈಂ ಪೊಲೀಸರು 45ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರು ಆರೋಪಿಗಳ ವಿರುದ್ಧ ಸುಮಾರು 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್ನಲ್ಲಿ 6 ಆರೋಪಿಗಳ ಹೇಳಿಕೆ ದಾಖಲು ಮಾಡಲಾಗಿದೆ. ಆರೋಪಿಗಳಲ್ಲಿ ಕೆಲವರು ನಟ ಸುದೀಪ್ ಅಭಿಮಾನಿಗಳು ಎನ್ನುವುದು ಬಹಿರಂಗವಾಗಿದೆ. ಎಲ್ಲರೂ ನಕಲಿ ಐಡಿಗಳನ್ನು ಕ್ರಿಯೇಟ್ ಮಾಡಿ ಕಾಮೆಂಟ್ ಮಾಡಿದ್ದಾರೆ. ಕೆಲವರು ಕಾಮೆಂಟ್ ಮಾಡೋ ಉದ್ದೇಶಕ್ಕೆ ನಕಲಿ ಅಕೌಂಟ್ ಮಾಡಿದ್ದರು ಎಂಬ ವಿಷಯ ಗೊತ್ತಾಗಿದೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಬಂಧಿತರು ಕೆಟ್ಟ ರೀತಿಯಲ್ಲಿ ಫೋಟೋ ಹಾಕಿ ಟ್ರೋಲ್ ಮಾಡಿದ್ದರು. ಪೋಸ್ಟ್ ಮಾಡುತ್ತಿರುವುದು ಅಶ್ಲೀಲ ಎಂಬುದು ಗೊತ್ತಿದ್ದೇ ಕಾಮೆಂಟ್ ಮಾಡಿರೋದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳ ಮೊಬೈಲ್ ಅನ್ನು ವಶಪಡಿಸಿಕೊಂಡು ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದ್ದು, ಡೇಟಾ ರಿಟ್ರೀವ್ ಮಾಡಿ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.
ಚಾರ್ಜ್ ಶೀಟ್ ಸಲ್ಲಿಕೆ ಆಗುತ್ತಿದ್ದಂತೆ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್ಗೆ ಜಾಮೀನು ಸಲ್ಲಿಕೆ ಮಾಡಿದ್ದಾರೆ. ಮಾರ್ಚ್ 24ಕ್ಕೆ ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ಕಾಮೆಂಟ್ ಮಾಡಿದ 6 ಆರೋಪಿಗಳು 66 ದಿನಗಳಿಂದ ಆರೋಪಿಗಳು ಜೈಲಿನಲ್ಲಿದ್ದಾರೆ.
