Latest News ರಾಜ್ಯ

ಇನ್‌ಪೆಕ್ಟರ್ ಸಂದೇಶ್ ಕಾಮಕಾಂಡ: ಅಪ್ರಾಪ್ತ ಬಾಲಕಿ ಮೇಲೂ ಕಣ್ಣು,ಬೆಚ್ಚಿಳೀಸಿದ ಆಡಿಯೋ

ದೂರು ನೀಡಲು ಬಂದ ಮಹಿಳೆಯನ್ನೆ ಲೈಂಗಿಕವಾಗಿ ಬಳಸಿಕೊಂಡ ಕಾಮುಕ ಪೊಲೀಸ್ ಅಧಿಕಾರಿಯ ಕರ್ಮಕಾಂಡ ಈಗ ಬಯಲಾಗಿದೆ. ಮೂಡಬಿದ್ರೆ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಕೇಳಿ ಬಂದಿರುವ ಗಂಭೀರ ಆರೋಪಗಳು ಇಡೀ ಪೊಲೀಸ್ ಇಲಾಖೆಯನ್ನೇ ತಲೆತಗ್ಗಿಸುವಂತೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ. ಕೌಟುಂಬಿಕ ಸಮಸ್ಯೆ ಅಂತ ದೂರು ನೀಡಲು ಬರುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಈತ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಸಂತ್ರಸ್ತೆಯೊಬ್ಬಳ ಗಂಡನನ್ನು ಕೇಸ್‌ನಲ್ಲಿ ಸಿಲುಕಿಸಿ, ಆತನನ್ನು ಬಿಡುಗಡೆ ಮಾಡಲು ‘ನನ್ನ ಜೊತೆ ಮಲಗಬೇಕು ಅಥವಾ 25 ಲಕ್ಷ ರೂಪಾಯಿ ನೀಡಬೇಕು’ ಎಂದು ಇನ್ಸ್‌ಪೆಕ್ಟರ್ ಧಮಕಿ ಹಾಕಿರುವ ವಿಷಯ ಈಗ ಬೆಳಕಿಗೆ ಬಂದಿದೆ. ‘ನಾನು ಪೋಸ್ಟಿಂಗ್‌ಗಾಗಿ ಗೃಹಸಚಿವರಿಗೆ 50 ಲಕ್ಷ ನೀಡಿ ಬಂದಿದ್ದೇನೆ’ ಎಂದು ಈತ ಅಹಂಕಾರದಿಂದ ಹೇಳಿಕೊಂಡಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.

ಇಷ್ಟೆಯಲ್ಲದೆ ಈ ಇನ್ಸ್‌ಪೆಕ್ಟರ್‌ ತಾನು ಲೈಂಗಿಕವಾಗಿ ಬಳಸಿಕೊಂಡ ಮಹಿಳೆಯೊಬ್ಬರ ಅಪ್ರಾಪ್ತ ಮಗಳ ಮೇಲೂ ಕೆಟ್ಟದೃಷ್ಟಿ ಬೀರಿದ್ದಾನೆ. ತನ್ನ ಲೈಂಗಿಕ ಚಟ ತೀರಿಸಿಕೊಳ್ಳಲು ಬಳಸಿಕೊಂಡಿದ್ದ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಕಣ್ಣುಹಾಕಿದ್ದಾನೆ, ಆಕೆ ಓದುತ್ತಿರುವ ಕಾಲೇಜಿಗೆ ಹೋಗುತ್ತೇನೆ ಎಂದು ಫೋನ್‌ನಲ್ಲಿ ಸಂತ್ರಸ್ತೆಗೆ ಬೆದರಿಕೆ ಹಾಕಿರುವ ಆಡಿಯೋ ಬೆಚ್ಚಿಬೀಳಿಸುತ್ತೆ. ಈ ಆಡಿಯೋ ಈಗ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ಕೆಲವು ತಿಂಗಳುಗಳಿಂದ ಈತನ ವಿರುದ್ಧ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂಬ ಆರೋಪವಿತ್ತು. ಹಿರಿಯ ಅಧಿಕಾರಿಗಳೇ ಈತನನ್ನು ರಕ್ಷಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು. ಇದೀಗ ಪ್ರಕರಣದ ತೀವ್ರತೆ ಅರಿತ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತನಿಖೆಗೆ ಆದೇಶಿಸಿದ್ದಾರೆ. ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್ ಅವರಿಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ.

 

Leave a Reply

Your email address will not be published. Required fields are marked *